ಸಮುದಾಯ ಕಲ್ಯಾಣ

 ಹಟ್ಟಿ ಚಿನ್ನದ ಗಣಿಯು ೧೨೦ ಹಾಸಿಗೆಗಳ ಸಾಮರ್ಥ್ಯದ ಅತಿ ನವೀನ ಆಸ್ಪತ್ರೆಯನ್ನು ಹೊಂದಿರುತ್ತದೆ. ಹಟ್ಟಿಯಲ್ಲಿ ಈಗಿರುವ ಆಸ್ಪತ್ರೆಯಲ್ಲಿ ಹವಾ ನಿಯಂತ್ರಿತ ಶಸ್ತ್ರಚಿಕಿತ್ಸಾ ಕೊಠಡಿ, ತೀವ್ರ ನಿಗಾ ಘಟಕ, ಇಸಿಜಿ, ಎಕ್ಸ್ ರೇ, ಅಲ್ಟ್ರಾಸೌಂಡ್ ಸ್ಕ್ಯಾನರ್, ಡಿಫೈಬ್ರಿಲೇಟರ್ ಜೊತೆಗೆ ಹೃದಯಬಡಿತ ಮಾನಿಟರ್, ಆಟೋ ಅನಲೈಸರ್, ಶ್ವಾಸಕೋಶ ಕಾರ್ಯ ಪರೀಕ್ಷಿಸುವ ಕಂಪ್ಯೂಟರ್, ರಕ್ತನಿಧಿ, ವೆಂಟಿಲೇಟರ್ ಇತ್ಯಾದಿಗಳಿದ್ದು, ೨೦ ಮಂದಿ ತಜ್ಞ ಹಾಗೂ ತಜ್ಞರಲ್ಲದ ವೈದ್ಯರು ಮತ್ತು ೧೨೫ ಅರೆ ವೈದ್ಯಕೀಯ ಸಿಬ್ಬಂದಿ ಇರುತ್ತಾರೆ.

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತವು ಕಂಪನಿಯ ಸಿಬ್ಬಂದಿ, ನೌಕರರಿಗೆ ಅವರ ಆಶ್ರಯಿತರಿಗೆ ಮತ್ತು ಸಾರ್ವಜನಿಕರಿಗೆ ಅಸದಳ ಸೇವೆಯನ್ನು ಒದಗಿಸುತ್ತಿದೆ. ೨೦೦೮ನೇ ವರ್ಷದಲ್ಲಿ ಕಂಪನಿ ಆಸ್ಪತ್ರೆಯು ಸರ್ಕಾರಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಹಲವು ರೋಗ ನಿರೋಧಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿತು. ಆಸ್ಪತ್ರೆಯಲ್ಲಿ ಕಣ್ಣು ಪರೀಕ್ಷೆ, ಆರೋಗ್ಯ ಪರೀಕ್ಷೆ, ರಕ್ತದಾನ ಶಿಬಿರ ಇತ್ಯಾದಿಗಳನ್ನು ಏರ್ಪಡಿಸುತ್ತದೆ. ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಆಸ್ಪತ್ರೆಯು ಸುತ್ತಮುತ್ತಲ ಗ್ರಾಮಗಳಲ್ಲಿ ಆರೋಗ್ಯ ಶಿಬಿರಗಳನ್ನು ಎರ್ಪಡಿಸಿ ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಆರೋಗ್ಯ ಸೇವೆಯನ್ನು ಜನರ ಮನೆಬಾಗಿಲಿಗೆ ತೆಗೆದುಕೊಂಡು ಹೋಗುವ ಇರಾದೆಯುಳ್ಳದ್ದಾಗಿರುತ್ತದೆ.

ಇತ್ತೀಚಿನ ನವೀಕರಣ​ : 21-04-2021 09:40 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080